ನೀವೂ ಕಾನನಕ್ಕೆ ಬರೆಯಬಹುದು

ನೀವೂ ಕಾನನಕ್ಕೆ ಬರೆಯಬಹುದು

©ಮಹದೇವ ಕೆ. ಸಿ.

 ಇದು ಬೇಸಿಗೆಕಾಲ. ಬಿಸಿಲು ಎಂದಾಕ್ಷಣ ಮಕ್ಕಳಿಗೆ ಬೇಸಿಗೆ ರಜದ ನೆನಪಾದರೆ, ಬಿಸಿಲ ಬೇಗೆಯಲ್ಲಿ ಬೆವರು ಸುರಿಸುತ್ತಾ ದುಡಿಯುವ ರೈತರಿಗೆ ಬರಗಾಲ, ಕ್ಷಾಮದ ಬಗ್ಗೆ ಚಿಂತೆ. ನಮ್ಮ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಕಾಡ್ಗಿಚ್ಚಿನ ಚಿಂತೆ. ಹಾಗೆಂದರೆ ಕಾಡ್ಗಿಚ್ಚು ಎಂಬುದು ಬಿಸಿಲಿಗೆ ಮಾತ್ರವೇ ಕಾಣಿಸುತ್ತದೆ ಎಂದಲ್ಲ. ಸ್ವಾಭಾವಿಕವಾಗಿಯೂ ಮಿಂಚು, ಗಾಳಿಯ ಘರ್ಷಣೆಯಿಂದ ಸಂಭವಿಸುವ ಸಾಧ್ಯತೆ ಇದೆ. ಆದರೆ ಬಹಳ ಅಪರೂಪ. ಇಂದಿನ ವಿದ್ಯಮಾನಗಳಲ್ಲಿ ಕಾಡ್ಗಿಚ್ಚಿಗೆ ಮಾನವ ಚಟುವಟಿಕೆಗಳಾದ ಆರದ ಬೀಡಿ ತುಂಡುಗಳನ್ನು ಎಸೆಯುವುದು, ಅರಣ್ಯಕ್ಕೆ ಹತ್ತಿರ ಇರುವ ಕಸಕ್ಕೆ ಬೆಂಕಿ ಹಾಕುವುದು, ಕಾಡಿನ ಅಂಚಿನಲ್ಲಿ ಅಡಿಗೆ ಮಾಡಿ ಒಲೆ ಆರಿಸದೆ ಬಿಡುವುದು ಮತ್ತು ಅರಣ್ಯ ಸಿಬ್ಬಂದಿಗಳ ಮೇಲಿನ ದ್ವೇಷದಿಂದ ಕಾಡಿಗೆ ಬೆಂಕಿ ಹಾಕುವುದು ಹೀಗೆ ಹಲವಾರು ಕಾರಣಗಳಾಗಿವೆ. ಕಾಡಿಗೆ ಬೆಂಕಿ ಬೀಳುವುದರಿಂದ ಅಲ್ಲಿರುವ ಭೂಮಿ ಸುಟ್ಟು, ಹೊಸ ಸಸ್ಯಗಳು ಬೆಳೆಯಲು ಸಹಾಯವಾಗುತ್ತದೆ ಎಂದು ಕೆಲವರು ನಂಬಿದರೆ, ಕೆಲವೊಮ್ಮೆ ಕಾಡ್ಗಿಚ್ಚಿನಿಂದ ಬೆಂಕಿಯ ಕೆನ್ನಾಲಿಗೆಗೆ ಬಹುತೇಕ ಕಾಡು ಸುಟ್ಟು ನಾಶವಾಗುವ ಜೊತೆಗೆ ವನ್ಯಜೀವಿಗಳ ಸಾವಿನ ಸಾಧ್ಯತೆಗಳೂ ಇವೆ.

ಇನ್ನೂ ವಾಹನಗಳು ಹೊರಸೂಸುವ ವಿಷಕಾರಿ ಅನಿಲಗಳು ಮತ್ತು ಕಾಡ್ಗಿಚ್ಚಿನಂತಹ ಪರಿಣಾಮ ಮುಂತಾದ ಕಾರಣಗಳಿಂದಾಗಿ ಜಾಗತಿಕ ತಾಪಮಾನ ಹೆಚ್ಚಾಗುತ್ತಿರುವುದನ್ನು ಕೆಲವು ಸಂಶೋಧನೆಗಳು ಹೇಳುತ್ತವೆ. ನಾವು ಇದರ ಪರಿಣಾಮವನ್ನು ಮುಂದೆ ಅನುಭವಿಸಬೇಕಾಗುತ್ತದೆ. ಇದನ್ನು ಅರಿತು ಇನ್ನು ಮುಂದಾದರೂ ಪರಿಸರ ಸ್ನೇಹಿ ಅಭ್ಯಾಸಗಳನ್ನು ರೂಢಿಸಿಕೊಳ್ಳುವುದು ಒಳಿತು.

 ಇದೇ ರೀತಿಯ ಮಾಹಿತಿಗಳನ್ನು ನೀಡಲು ನೀವೂ ಕಾನನಕ್ಕೆ ಬರೆಯಬಹುದು.  ಈ ರೀತಿಯ ಪರಿಸರದ ಬಗೆಗಿನ ಮಾಹಿತಿಯನ್ನು ಒದಗಿಸಲು ಇರುವ ಕಾನನ ಇ-ಮಾಸಿಕಕ್ಕೆ ಮುಂದಿನ ತಿಂಗಳ ಸಂಚಿಕೆಗೆ ಲೇಖನಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಪರಿಸರಕ್ಕೆ ಸಂಬಂಧಿಸಿದ ಕಥೆ, ಕವನ, ಛಾಯಾಚಿತ್ರ, ಚಿತ್ರಕಲೆ, ಪ್ರವಾಸ ಕಥನಗಳನ್ನು ಕಾನನ ಮಾಸಿಕದ ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದು.

ಕಾನನ ಪತ್ರಿಕೆಯ ಇ-ಮೇಲ್ ವಿಳಾಸ: [email protected]
ಅಂಚೆ ವಿಳಾಸ:

ಅಡವಿ ಫೀಲ್ಡ್ ಸ್ಟೇಷನ್,
ಒಂಟೆಮಾರನ ದೊಡ್ಡಿ ಗ್ರಾಮ ,
ರಾಗಿಹಳ್ಳಿ ಅಂಚೆ,
ಜಿಗಣಿ ಹೋಬಳಿ,
ಆನೇಕಲ್ ತಾಲ್ಲೂಕು ,
ಬೆಂಗಳೂರು ನಗರ ಜಿಲ್ಲೆ
ಪಿನ್ ಕೋಡ್: 560083. ಗೆ ಕಳಿಸಿಕೊಡಬಹುದು.

ವಿಶೇಷ ಮನವಿ: ಕಾನನ ಪತ್ರಿಕೆಯು ಯುವ ಜನರಲ್ಲಿ, ಮಕ್ಕಳಲ್ಲಿ ಪರಿಸರದ ಪಸರನ್ನು ಹರಡಲು ಮತ್ತು ಪ್ರಕೃತಿ ಬಗ್ಗೆ ಜಾಗೃತಿ ಮೂಡಿಸಲು ಇರುವ ಮುಕ್ತ ವೇದಿಕೆಯಾಗಿದೆ.  ಈ ಪತ್ರಿಕೆಯ ವಿನ್ಯಾಸ, ವಿಷಯವನ್ನು ಬದಲಿಸದೆ pdf ಪ್ರತಿಯನ್ನು ಯಥಾಸ್ಥಿತಿಯಲ್ಲಿ ಯಾರು ಬೇಕಾದರೂ ಪ್ರಿಂಟ್ ಮಾಡಿಸಿ ಓದಲು ಬಳಸಬಹುದು ಅಥವಾ ಪರಿಸರದ ಬಗ್ಗೆ ಅರಿವು ಮೂಡಿಸಲು ಶಾಲೆಗಳಿಗೆ ನೀಡಬಹುದು.

Print Friendly, PDF & Email
Spread the love
error: Content is protected.