ನೀವೂ ಕಾನನಕ್ಕೆ ಬರೆಯಬಹುದು

ನೀವೂ ಕಾನನಕ್ಕೆ ಬರೆಯಬಹುದು

©pexels-camila-vazquez.

  ಕಡಲ ಆಮೆಗಳು ಸುಮಾರು 10 ಕೋಟಿ ವರ್ಷಗಳ ಹಿಂದಿನವು ಮತ್ತು ಡೈನೋಸಾರ್ ಗಳ ಕಾಲದಲ್ಲೂ ವಾಸಿಸುತ್ತಿದ್ದವು. ಇವುಗಳಿಗೆ ತಮ್ಮ ಆಹಾರವನ್ನು ತಿನ್ನಲು ಹಲ್ಲುಗಳಿಲ್ಲ ಬದಲಿಗೆ ಕೊಕ್ಕಿನಂತಹ ಬಾಯಿಯನ್ನು ಬಳಸುತ್ತವೆ. ಆಮೆಯ ಚಿಪ್ಪುಗಳು 50 ಕ್ಕೂ ಹೆಚ್ಚು ಮೂಳೆಗಳಿಂದ ಮಾಡಲ್ಪಟ್ಟಿದೆ. ಕಡಲ ಆಮೆಗಳು ತುಂಬಾ ದೂರದವರೆಗೆ ವಲಸೆ ಹೋಗುತ್ತವೆ. ಹೆಣ್ಣು ಆಮೆಗಳು ತಮ್ಮ ಮೊಟ್ಟೆಗಳನ್ನು ಇಡಲು ಅವು ಜನಿಸಿದ ಕಡಲತೀರಕ್ಕೆ ಹಿಂತಿರುಗುವುದು ವಿಶೇಷ. ಹವಾಮಾನ ಬದಲಾವಣೆಯಿಂದ ಮರಳಿನ ತಾಪಮಾನವು ಹೆಚ್ಚಾಗುತ್ತಿರುವ ಕಾರಣ ಗಂಡು ಆಮೆಗಳಿಗಿಂತ ಹೆಚ್ಚು ಹೆಣ್ಣು ಆಮೆಗಳು ಜನಿಸುತ್ತಿವೆ. 1000 ಸಮುದ್ರದ ಆಮೆ ​​ಮರಿಗಳಲ್ಲಿ 1 ಮಾತ್ರ ಉಳಿದುಕೊಳ್ಳುತ್ತದೆ ಎಂದು ಅಂದಾಜಿಸಲಾಗಿದೆ. ಮೊಟ್ಟೆಯಿಂದ ಹಿಡಿದು ದೊಡ್ಡದಾಗುವವರೆಗೂ ಒಂದಲ್ಲ ಒಂದು ರೀತಿಯಲ್ಲಿ ಜೀವನಕ್ಕೋಸ್ಕರ ಹೋರಾಡುತ್ತಿರುತ್ತವೆ. ಇವು ಮೀನುಗಾರಿಕೆಯ ಬಲೆಯಲ್ಲಿ ಆಕಸ್ಮಿಕವಾಗಿ ಸಿಕ್ಕಿಹಾಕಿಕೊಳ್ಳುತ್ತಿವೆ. ಪ್ಲಾಸ್ಟಿಕ್ ಅನ್ನು ಸೇವಿಸುತ್ತಿವೆ. ಈ ರೀತಿಯ ಮಾನವನ ನಿರ್ಲಕ್ಷ್ಯತನವು ಆಮೆಗಳ ಉಳಿವಿಗೆ ಕಂಟಕವಾಗುತ್ತಿದೆ. ಕಡಲ ಆಮೆಗಳ ಬಗ್ಗೆ ಜಾಗೃತಿ ಮೂಡಿಸಲು ಜೂನ್ 16ರಂದು ವಿಶ್ವಕಡಲಆಮೆದಿನ”ವೆಂದು ಆಚರಿಸಲಾಗುತ್ತದೆ.

ಇನ್ನೂ ವಾಹನಗಳು ಹೊರಸೂಸುವ ವಿಷಕಾರಿ ಅನಿಲಗಳು ಮತ್ತು ಕಾಡ್ಗಿಚ್ಚಿನಂತಹ ಪರಿಣಾಮ ಮುಂತಾದ ಕಾರಣಗಳಿಂದಾಗಿ ಜಾಗತಿಕ ತಾಪಮಾನ ಹೆಚ್ಚಾಗುತ್ತಿರುವುದನ್ನು ಕೆಲವು ಸಂಶೋಧನೆಗಳು ಹೇಳುತ್ತವೆ. ನಾವು ಇದರ ಪರಿಣಾಮವನ್ನು ಮುಂದೆ ಅನುಭವಿಸಬೇಕಾಗುತ್ತದೆ. ಇದನ್ನು ಅರಿತು ಇನ್ನು ಮುಂದಾದರೂ ಪರಿಸರ ಸ್ನೇಹಿ ಅಭ್ಯಾಸಗಳನ್ನು ರೂಢಿಸಿಕೊಳ್ಳುವುದು ಒಳಿತು.

 ಇದೇ ರೀತಿಯ ಮಾಹಿತಿಗಳನ್ನು ನೀಡಲು ನೀವೂ ಕಾನನಕ್ಕೆ ಬರೆಯಬಹುದು.  ಈ ರೀತಿಯ ಪರಿಸರದ ಬಗೆಗಿನ ಮಾಹಿತಿಯನ್ನು ಒದಗಿಸಲು ಇರುವ ಕಾನನ ಇ-ಮಾಸಿಕಕ್ಕೆ ಮುಂದಿನ ತಿಂಗಳ ಸಂಚಿಕೆಗೆ ಲೇಖನಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಪರಿಸರಕ್ಕೆ ಸಂಬಂಧಿಸಿದ ಕಥೆ, ಕವನ, ಛಾಯಾಚಿತ್ರ, ಚಿತ್ರಕಲೆ, ಪ್ರವಾಸ ಕಥನಗಳನ್ನು ಕಾನನ ಮಾಸಿಕದ ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದು.

ಕಾನನ ಪತ್ರಿಕೆಯ ಇ-ಮೇಲ್ ವಿಳಾಸ: [email protected]
ಅಂಚೆ ವಿಳಾಸ:

ಅಡವಿ ಫೀಲ್ಡ್ ಸ್ಟೇಷನ್,
ಒಂಟೆಮಾರನ ದೊಡ್ಡಿ ಗ್ರಾಮ ,
ರಾಗಿಹಳ್ಳಿ ಅಂಚೆ,
ಜಿಗಣಿ ಹೋಬಳಿ,
ಆನೇಕಲ್ ತಾಲ್ಲೂಕು ,
ಬೆಂಗಳೂರು ನಗರ ಜಿಲ್ಲೆ
ಪಿನ್ ಕೋಡ್: 560083. ಗೆ ಕಳಿಸಿಕೊಡಬಹುದು.

ವಿಶೇಷ ಮನವಿ: ಕಾನನ ಪತ್ರಿಕೆಯು ಯುವ ಜನರಲ್ಲಿ, ಮಕ್ಕಳಲ್ಲಿ ಪರಿಸರದ ಪಸರನ್ನು ಹರಡಲು ಮತ್ತು ಪ್ರಕೃತಿ ಬಗ್ಗೆ ಜಾಗೃತಿ ಮೂಡಿಸಲು ಇರುವ ಮುಕ್ತ ವೇದಿಕೆಯಾಗಿದೆ.  ಈ ಪತ್ರಿಕೆಯ ವಿನ್ಯಾಸ, ವಿಷಯವನ್ನು ಬದಲಿಸದೆ pdf ಪ್ರತಿಯನ್ನು ಯಥಾಸ್ಥಿತಿಯಲ್ಲಿ ಯಾರು ಬೇಕಾದರೂ ಪ್ರಿಂಟ್ ಮಾಡಿಸಿ ಓದಲು ಬಳಸಬಹುದು ಅಥವಾ ಪರಿಸರದ ಬಗ್ಗೆ ಅರಿವು ಮೂಡಿಸಲು ಶಾಲೆಗಳಿಗೆ ನೀಡಬಹುದು.

Print Friendly, PDF & Email
Spread the love
error: Content is protected.