ನೀವೂ ಕಾನನಕ್ಕೆ ಬರೆಯಬಹುದು
ಜೀವವೈವಿಧ್ಯತೆಯ ಆಗರವಾದ ನಮ್ಮ ಪ್ರಕೃತಿಯು ಒಂದು ವಿಸ್ಮಯವೇ ಸರಿ. ಈ ಅಗಣಿತ ಜೀವಜಂತುಗಳಲ್ಲಿ ಲೆಕ್ಕಕ್ಕೆ ಸಿಗುವಂತಹವು ಒಂದಷ್ಟಾದರೆ, ಲೆಕ್ಕದ ಪರಿಧಿಗೂ ಬಾರದವು ಎಷ್ಟೋ ಎಂಬುದು ಆಶ್ಚರ್ಯಕಾರಿಯಾಗಿದೆ. ವೈವಿಧ್ಯಮಯವಾದ ಮರ-ಗಿಡಗಳು, ಪ್ರಾಣಿಗಳು, ಚಿಲಿಪಿಲಿ ಗುಟ್ಟುವ ಹಕ್ಕಿಗಳು ಹಾಗೂ ಕ್ರಿಮಿಕೀಟಗಳು ಪರಸ್ಪರ ಸಂಬಂಧವನ್ನು ಹೊಂದಿದ್ದು, ಪರಸ್ಪರ ಅವಲಂಬಿಯಾಗಿ ನಿಸರ್ಗದಲ್ಲಿ ಸಮತೋಲನವನ್ನು ಕಾಯ್ದುಕೊಳ್ಳುವಲ್ಲಿ ಮಹತ್ತರ ಪಾತ್ರವಹಿಸುತ್ತವೆ.
ಅದಕ್ಕಾಗಿ ಈ ಜೀವವೈವಿಧ್ಯವನ್ನು ಕಾಪಾಡಿ, ಉಳಿಸಿ, ಬೆಳೆಸುವ ಸಂಕಲ್ಪದೊಂದಿಗೆ ಪ್ರತಿ ವರ್ಷ ಮೇ 22 ರಂದು ಅಂತರಾಷ್ಟ್ರೀಯ ಜೀವವೈವಿಧ್ಯ ದಿನವನ್ನು ಆಚರಿಸಲಾಗುತ್ತದೆ. 2000ನೇ ಇಸವಿಯಿಂದ ಈ ದಿನವನ್ನು ಜಾಗತಿಕವಾಗಿ ಆಚರಿಸಲಾಗುತ್ತಿದ್ದು, ರಾಷ್ಟ್ರೀಯ ಮತ್ತು ಜಾಗತಿಕ ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ ಜೀವವೈವಿಧ್ಯದ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ
ಅಭಿವೃದ್ಧಿಯ ಹೆಸರಿನಲ್ಲಿ ಅರಣ್ಯ ನಾಶ, ರಸ್ತೆ ಮತ್ತು ಕಾರ್ಖಾನೆಗಳ ನಿರ್ಮಾಣವು ಜೀವವೈವಿಧ್ಯತೆಯ ಮಾರಣಹೋಮಕ್ಕೆ ನಾಂದಿಯಾಗುತ್ತಿವೆ. ಇದರ ಪರಿಣಾಮವಾಗಿ ಇಂದು ಅನೇಕ ಪ್ರಾಣಿಗಳು ಅಳಿವಿನಂಚಿಗೆ ತಲುಪಿವೆ. ಆದ್ದರಿಂದ ನಾವೆಲ್ಲರೂ ಈ ಅಮೂಲ್ಯ ಜೀವಸಂಕುಲವನ್ನು ರಕ್ಷಿಸುವ ಸಲುವಾಗಿ ಟೊಂಕ ಕಟ್ಟಿ ನಿಲ್ಲಬೇಕಾಗಿದೆ.ಈ ರೀತಿಯ ಪರಿಸರದ ಬಗೆಗಿನ ಮಾಹಿತಿಯನ್ನು ಒದಗಿಸಲು ಇರುವ ಕಾನನ ಇ-ಮಾಸಿಕಕ್ಕೆ ಮುಂದಿನ ತಿಂಗಳ ಸಂಚಿಕೆಗೆ ಲೇಖನಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಪರಿಸರಕ್ಕೆ ಸಂಬಂಧಿಸಿದ ಕಥೆ, ಕವನ, ಛಾಯಾಚಿತ್ರ, ಚಿತ್ರಕಲೆ, ಪ್ರವಾಸ ಕಥನಗಳನ್ನು ಕಾನನ ಮಾಸಿಕದ ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದು.
ಕಾನನ ಪತ್ರಿಕೆಯ ಇ-ಮೇಲ್ ವಿಳಾಸ: kaanana.mag@gmail.com
ಅಂಚೆ ವಿಳಾಸ:
ಅಡವಿ ಫೀಲ್ಡ್ ಸ್ಟೇಷನ್,
ಒಂಟೆಮಾರನ ದೊಡ್ಡಿ ಗ್ರಾಮ ,
ರಾಗಿಹಳ್ಳಿ ಅಂಚೆ,
ಜಿಗಣಿ ಹೋಬಳಿ,
ಆನೇಕಲ್ ತಾಲ್ಲೂಕು ,
ಬೆಂಗಳೂರು ನಗರ ಜಿಲ್ಲೆ
ಪಿನ್ ಕೋಡ್: 560083. ಗೆ ಕಳಿಸಿಕೊಡಬಹುದು.
