ನೀವೂ ಕಾನನಕ್ಕೆ ಬರೆಯಬಹುದು
ಜೀವವೈವಿಧ್ಯತೆಯ ಆಗರವಾದ ನಮ್ಮ ಪ್ರಕೃತಿಯು, ಒಂದು ವಿಸ್ಮಯವೇ ಸರಿ. ಈ ಅಗಣಿತ ಜೀವ-ಜಂತುಗಳಲ್ಲಿ, ಲೆಕ್ಕಕ್ಕೆ ಸಿಗುವಂತಹವು ಒಂದಷ್ಟಾದರೆ, ಲೆಕ್ಕದ ಪರಿಧಿಗೇ ಬಾರದವು ಎಷ್ಟೋ? ವೈವಿಧ್ಯಮಯವಾದ ಮರ-ಗಿಡಗಳು, ಪ್ರಾಣಿಗಳು, ಚಿಲಿಪಿಲಿಗುಟ್ಟುವ ಹಕ್ಕಿಗಳು ಹಾಗೂ ಕ್ರಿಮಿಕೀಟಗಳು ಪರಸ್ಪರ ಸಂಬಂಧವನ್ನು ಹೊಂದಿವೆ ಮತ್ತು ಪರಸ್ಪರಾವಲಂಬಿಯಾಗಿ ನಿಸರ್ಗದಲ್ಲಿ ಸಮತೋಲನವನ್ನು ಕಾಯ್ದುಕೊಳ್ಳುವಲ್ಲಿ ಮಹತ್ತರ ಪಾತ್ರವಹಿಸುತ್ತವೆ. ಅದಕ್ಕೆಂದೇ ಈ ಜೀವವೈವಿಧ್ಯವನ್ನು ಕಾಪಾಡುವ ಅವನ್ನು ಉಳಿಸಿ, ಬೆಳೆಸುವ ಸಂಕಲ್ಪದೊಂದಿಗೆ ಪ್ರತಿ ವರ್ಷ ಮೇ 22 ರಂದು ಅಂತರಾಷ್ಟ್ರೀಯಜೀವವೈವಿಧ್ಯದಿನವನ್ನಾಗಿ ಆಚರಿಸಲಾಗುತ್ತದೆ. ಇದೀಗ 25 ವರ್ಷಗಳಿಂದ ಈ ದಿನವನ್ನು ಆಚರಿಸಲಾಗುತ್ತಿದ್ದು, ರಾಷ್ಟೀಯ ಮತ್ತು ಜಾಗತಿಕ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿ, ಜೀವ ವೈವಿಧ್ಯದ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲು ಸಂಕಲ್ಪ ಮಾಡಲಾಗುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ಅರಣ್ಯ ನಾಶ, ರಸ್ತೆ ಕಾರ್ಖಾನೆಗಳ ನಿರ್ಮಾಣ ಜೀವವೈವಿಧ್ಯತೆಯ ಮಾರಣಹೋಮಕ್ಕೆ ನಾಂದಿಯಾಡುತ್ತಿವೆ. ಆದ್ದರಿಂದಲೇ ಇಂದು ಹಲವು ಪ್ರಾಣಿಗಳು ಅಳಿವಿನಂಚಿಗೆ ತಲುಪಿವೆ. ಹಾಗಾಗಿ ನಾವೆಲ್ಲರೂ ಈ ಅಮೂಲ್ಯ ಜೀವಸಂಕುಲವನ್ನು ರಕ್ಷಿಸುವ ಸಲುವಾಗಿ ಟೊಂಕ ಕಟ್ಟಿ ನಿಲ್ಲಬೇಕಾಗಿದೆ.
ಈ ರೀತಿಯ ಪರಿಸರದ ಬಗೆಗಿನ ಮಾಹಿತಿಯನ್ನು ಒದಗಿಸಲು ಇರುವ ಕಾನನ ಇ-ಮಾಸಿಕಕ್ಕೆ ಮುಂದಿನ ತಿಂಗಳ ಪ್ರತಿಗೆ ಲೇಖನಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಪರಿಸರಕ್ಕೆ ಸಂಬಂಧಿಸಿದ ಕಥೆ, ಕವನ, ಛಾಯಾಚಿತ್ರ, ಚಿತ್ರಕಲೆ, ಪ್ರವಾಸ ಕಥನಗಳನ್ನು ಕಾನನ ಮಾಸಿಕದ ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದು.
ಕಾನನ ಪತ್ರಿಕೆಯ ಇ-ಮೇಲ್ ವಿಳಾಸ: [email protected]
ಅಂಚೆ ವಿಳಾಸ:
ಅಡವಿ ಫೀಲ್ಡ್ ಸ್ಟೇಷನ್,
ಒಂಟೆಮಾರನ ದೊಡ್ಡಿ ಗ್ರಾಮ ,
ರಾಗಿಹಳ್ಳಿ ಅಂಚೆ,
ಜಿಗಣಿ ಹೋಬಳಿ,
ಆನೇಕಲ್ ತಾಲ್ಲೂಕು ,
ಬೆಂಗಳೂರು ನಗರ ಜಿಲ್ಲೆ
ಪಿನ್ ಕೋಡ್ :560083. ಗೆ ಕಳಿಸಿಕೊಡಬಹುದು.