ನೀವೂ ಕಾನನಕ್ಕೆ ಬರೆಯಬಹುದು

ಭೂಮಿಯ ಅತ್ಯಂತ ವೈಶಿಷ್ಟ್ಯಪೂರ್ಣ ಜೀವಿಗಳಲ್ಲಿ ಘೇಂಡಾಮೃಗ ಒಂದು. ಘೇಂಡಾಮೃಗಗಳು ಸಾಮಾನ್ಯವಾಗಿ ಒಂಟಿಯಾಗಿಯೇ ವಾಸಿಸುತ್ತವೆ. ಇವು ನಿಶಾಚರಿಗಳು. ಸಂಜೆಯಿಂದ ಮುಂಜಾವಿನವರೆಗೂ ಆಹಾರಾನ್ವೇಷಣೆಯಲ್ಲಿ ತೊಡಗಿರುತ್ತವೆ. ಹಗಲೆಲ್ಲ ಯಾವುದಾದರೂ ಏಕಾಂತದ ಸ್ಥಳದಲ್ಲಿ ಮಲಗಿರುತ್ತವೆ. ಬಿಸಿಲಿನ ತಾಪ ಹೆಚ್ಚಾದಾಗ ಕೆಸರು ನೀರಿನಲ್ಲಿ ಹೊರಳಾಡುತ್ತವೆ, ನದಿಗಳಲ್ಲಿ ಈಜುತ್ತ ಕಾಲಕಳೆಯುವುದೆಂದರೆ ಇವುಗಳಿಗೆ ಬಲು ಅಚ್ಚುಮೆಚ್ಚು. ಎಲ್ಲ ಬಗೆಯ ಘೇಂಡಾಮೃಗಗಳೂ ಸಂಪೂರ್ಣ ಸಸ್ಯಾಹಾರಿಗಳು. ಇತ್ತೀಚಿನ ವರ್ಷಗಳಲ್ಲಿ ನಗರೀಕರಣ, ಹವಾಮಾನ ಬದಲಾವಣೆ ಮೊದಲಾದ ಅಂಶಗಳಿಂದ ಘೇಂಡಾಮೃಗದಂತಹ ಅಪರೂಪದ ಜೀವಿಗಳು ಅಳಿವಿನತ್ತ ಸಾಗುತ್ತಿವೆ. ಘೇಂಡಾಮೃಗಗಳ ವಿಶೇಷವಾದ ಕೊಂಬುಗಳಿಗೆ ಅವುಗಳನ್ನು ಬೇಟೆಯಾಡುತ್ತಿದ್ದಾರೆ. ಇದನ್ನು ತಡೆದು, ಘೇಂಡಾಮೃಗಗಳ ಕುರಿತು ಸಾರ್ವಜನಿಕರಿಗೆ ತಿಳುವಳಿಕೆ ನೀಡಿ, ಅದನ್ನು ರಕ್ಷಿಸುವ ಸಲುವಾಗಿ ಪ್ರತಿವರ್ಷ ಸೆಪ್ಟೆಂಬರ್ 22 ರಂದು ‘ವಿಶ್ವಘೇಂಡಾಮೃಗದಿನ’ವನ್ನು ಆಚರಿಸಲಾಗುತ್ತದೆ.

 ಈ ರೀತಿಯ ಪರಿಸರದ ಬಗೆಗಿನ ಮಾಹಿತಿಯನ್ನು ಒದಗಿಸಲು ಇರುವ ಕಾನನ ಇ-ಮಾಸಿಕಕ್ಕೆ ಮುಂದಿನ ತಿಂಗಳ ಪ್ರತಿಗೆ ಲೇಖನಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಪರಿಸರಕ್ಕೆ ಸಂಬಂಧಿಸಿದ ಕಥೆ, ಕವನ, ಛಾಯಾಚಿತ್ರ, ಚಿತ್ರಕಲೆ, ಪ್ರವಾಸ ಕಥನಗಳನ್ನು ಕಾನನ ಮಾಸಿಕದ ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದು.

ಕಾನನ ಪತ್ರಿಕೆಯ ಇ-ಮೇಲ್ ವಿಳಾಸ: [email protected]
ಅಂಚೆ ವಿಳಾಸ:

ಅಡವಿ ಫೀಲ್ಡ್ ಸ್ಟೇಷನ್,
ಒಂಟೆಮಾರನ ದೊಡ್ಡಿ ಗ್ರಾಮ ,
ರಾಗಿಹಳ್ಳಿ ಅಂಚೆ,
ಜಿಗಣಿ ಹೋಬಳಿ,
ಆನೇಕಲ್ ತಾಲ್ಲೂಕು ,
ಬೆಂಗಳೂರು ನಗರ ಜಿಲ್ಲೆ
ಪಿನ್ ಕೋಡ್ :560083. ಗೆ ಕಳಿಸಿಕೊಡಬಹುದು.

Spread the love
error: Content is protected.