ನೀವೂ ಕಾನನಕ್ಕೆ ಬರೆಯಬಹುದು

ನೀವೂ ಕಾನನಕ್ಕೆ ಬರೆಯಬಹುದು

©ಧನರಾಜ್ ಎಮ್.

ತನ್ನ ಗಾಂಭೀರ್ಯ, ಕ್ರೌರ್ಯ, ಶಕ್ತಿಯಿಂದಾಗಿ ಸಿಂಹವನ್ನು “ಕಾಡಿನ ರಾಜ” ಎಂದು ಕರೆಯಲಾಗುತ್ತದೆ. ಸಿಂಹಗಳು ದಟ್ಟವಾದ ಅರಣ್ಯದಲ್ಲಿ ಇರುವುದಿಲ್ಲ. ಬದಲಿಗೆ ಕಲ್ಲು ಬಂಡೆಗಳು, ಹುಲ್ಲುಗಾವಲು ಹಾಗೂ ಕುರುಚಲು ಗಿಡಗಳ ಕಾಡಿನಲ್ಲಿ ವಾಸಿಸುತ್ತವೆ. ಭಾರತದಲ್ಲಿ ಗುಜರಾತಿನ ಗಿರ್ ಅರಣ್ಯದಲ್ಲಿ ಹೆಚ್ಚಾಗಿ ಕಂಡು ಬರುತ್ತವೆ. ಇವುಗಳು ಗುಂಪಿನಲ್ಲೇ ಇರುತ್ತವೆ. ಒಂದು ಗುಂಪಿನಲ್ಲಿ ಸುಮಾರು 15 ಸಿಂಹಗಳಿರುತ್ತವೆ. ಇವುಗಳು ಸಾಮಾನ್ಯವಾಗಿ ಹಗಲಿನಲ್ಲಿ ಮಲಗಿದ್ದು, ರಾತ್ರಿಯ ವೇಳೆ ಬೇಟೆಯಾಡುತ್ತವೆ. ಹೆಚ್ಚಾಗಿ ಹೆಣ್ಣು ಸಿಂಹಗಳು ಬೇಟೆಯಾಡುತ್ತವೆ. ಸಿಂಹಿಣಿಗಳು ಗರ್ಭಧರಿಸಿದ ಮೂರು ತಿಂಗಳಲ್ಲಿ ಮಕ್ಕಳಿಗೆ ಜನ್ಮ ನೀಡುತ್ತವೆ. ಒಂದು ಸಿಂಹದ ಜೀವಿತಾವಧಿ 15-16 ವರ್ಷವಷ್ಟೇ. ಅರಣ್ಯ ನಾಶ, ಕಾಡು ಪ್ರಾಣಿಗಳ ಬೇಟೆ ಈ ಎಲ್ಲಾ ಕಾರಣಗಳಿಂದಾಗಿ ಕಾಡಿನ ರಾಜ ಎಂದು ಕರೆಯಲ್ಪಡುವ ಸಿಂಹಗಳ ಸಂಖ್ಯೆ ಕ್ಷೀಣಿಸುತ್ತಿದೆ. ಕುಸಿಯುತ್ತಿರುವ ಸಿಂಹಗಳ ಸಂಖ್ಯೆಯ ಕುರಿತು ಜಾಗೃತಿ ಮೂಡಿಸಲು “ವಿಶ್ವ ಸಿಂಹ ದಿನ” ವನ್ನು ಆಗಸ್ಟ್ 10 ರಂದು ಆಚರಿಸಲಾಗುವುದು.

ಇನ್ನೂ ವಾಹನಗಳು ಹೊರಸೂಸುವ ವಿಷಕಾರಿ ಅನಿಲಗಳು ಮತ್ತು ಕಾಡ್ಗಿಚ್ಚಿನಂತಹ ಪರಿಣಾಮ ಮುಂತಾದ ಕಾರಣಗಳಿಂದಾಗಿ ಜಾಗತಿಕ ತಾಪಮಾನ ಹೆಚ್ಚಾಗುತ್ತಿರುವುದನ್ನು ಕೆಲವು ಸಂಶೋಧನೆಗಳು ಹೇಳುತ್ತವೆ. ನಾವು ಇದರ ಪರಿಣಾಮವನ್ನು ಮುಂದೆ ಅನುಭವಿಸಬೇಕಾಗುತ್ತದೆ. ಇದನ್ನು ಅರಿತು ಇನ್ನು ಮುಂದಾದರೂ ಪರಿಸರ ಸ್ನೇಹಿ ಅಭ್ಯಾಸಗಳನ್ನು ರೂಢಿಸಿಕೊಳ್ಳುವುದು ಒಳಿತು.

 ಇದೇ ರೀತಿಯ ಮಾಹಿತಿಗಳನ್ನು ನೀಡಲು ನೀವೂ ಕಾನನಕ್ಕೆ ಬರೆಯಬಹುದು.  ಈ ರೀತಿಯ ಪರಿಸರದ ಬಗೆಗಿನ ಮಾಹಿತಿಯನ್ನು ಒದಗಿಸಲು ಇರುವ ಕಾನನ ಇ-ಮಾಸಿಕಕ್ಕೆ ಮುಂದಿನ ತಿಂಗಳ ಸಂಚಿಕೆಗೆ ಲೇಖನಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಪರಿಸರಕ್ಕೆ ಸಂಬಂಧಿಸಿದ ಕಥೆ, ಕವನ, ಛಾಯಾಚಿತ್ರ, ಚಿತ್ರಕಲೆ, ಪ್ರವಾಸ ಕಥನಗಳನ್ನು ಕಾನನ ಮಾಸಿಕದ ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದು.

ಕಾನನ ಪತ್ರಿಕೆಯ ಇ-ಮೇಲ್ ವಿಳಾಸ: [email protected]
ಅಂಚೆ ವಿಳಾಸ:

ಅಡವಿ ಫೀಲ್ಡ್ ಸ್ಟೇಷನ್,
ಒಂಟೆಮಾರನ ದೊಡ್ಡಿ ಗ್ರಾಮ ,
ರಾಗಿಹಳ್ಳಿ ಅಂಚೆ,
ಜಿಗಣಿ ಹೋಬಳಿ,
ಆನೇಕಲ್ ತಾಲ್ಲೂಕು ,
ಬೆಂಗಳೂರು ನಗರ ಜಿಲ್ಲೆ
ಪಿನ್ ಕೋಡ್: 560083. ಗೆ ಕಳಿಸಿಕೊಡಬಹುದು.

ವಿಶೇಷ ಮನವಿ: ಕಾನನ ಪತ್ರಿಕೆಯು ಯುವ ಜನರಲ್ಲಿ, ಮಕ್ಕಳಲ್ಲಿ ಪರಿಸರದ ಪಸರನ್ನು ಹರಡಲು ಮತ್ತು ಪ್ರಕೃತಿ ಬಗ್ಗೆ ಜಾಗೃತಿ ಮೂಡಿಸಲು ಇರುವ ಮುಕ್ತ ವೇದಿಕೆಯಾಗಿದೆ.  ಈ ಪತ್ರಿಕೆಯ ವಿನ್ಯಾಸ, ವಿಷಯವನ್ನು ಬದಲಿಸದೆ pdf ಪ್ರತಿಯನ್ನು ಯಥಾಸ್ಥಿತಿಯಲ್ಲಿ ಯಾರು ಬೇಕಾದರೂ ಪ್ರಿಂಟ್ ಮಾಡಿಸಿ ಓದಲು ಬಳಸಬಹುದು ಅಥವಾ ಪರಿಸರದ ಬಗ್ಗೆ ಅರಿವು ಮೂಡಿಸಲು ಶಾಲೆಗಳಿಗೆ ನೀಡಬಹುದು.

Print Friendly, PDF & Email
Spread the love

Leave a Reply

Your email address will not be published. Required fields are marked *

error: Content is protected.