ನೀವೂ ಕಾನನಕ್ಕೆ ಬರೆಯಬಹುದು
© ಅರವಿಂದ ರಂಗನಾಥ್
ಯಾವ ಪ್ರದೇಶ ಶಾಶ್ವತವಾಗಿ ಅಥವಾ ಕಾಲಕ್ಕೆ ತಕ್ಕಂತೆ ನೀರಿನಿಂದ ಆವೃತವಾಗಿರುತ್ತದೋ ಆ ಪ್ರದೇಶವನ್ನ ಜೌಗು ಪ್ರದೇಶ ಎನ್ನುತ್ತಾರೆ. ಸಣ್ಣಸಣ್ಣ ತೊರೆಗಳು, ಕೆರೆಗಳು, ನದಿಗಳು, ಹವಳದ ದಿಣ್ಣೆಗಳು, ಮ್ಯಾಂಗ್ರೋವ್ ಕಾಡುಗಳು ಮೊದಲಾದವು ನೈಸರ್ಗಿಕ ಜೌಗು ಪ್ರದೇಶಗಳಾದರೆ ಭತ್ತದ ಗದ್ದೆ, ಮೀನುಸಾಕಾಣೆ ಕುಂಟೆಗಳು, ಉಪ್ಪಿನ ಇಂಗು ಗುಂಡಿಗಳು ಮಾನವ ನಿರ್ಮಿತ ಜೌಗು ಪ್ರದೇಶಗಳಾಗಿವೆ. ಹಿಂದೆ ಈ ಜೌಗು ಪ್ರದೇಶಗಳ ಪ್ರಾಮುಖ್ಯತೆ ಹಾಗೂ ಪರಿಸರದಲ್ಲಿ ಅವುಗಳ ಪಾತ್ರದ ಬಗ್ಗೆ ಅಷ್ಟಾಗಿ ಯಾರಿಗೂ ತಿಳಿದಿರಲಿಲ್ಲ ಹಾಗಾಗಿ 2ನೇ ಫೆಬ್ರವರಿ 1971 ರಂದು ಕ್ಯಾಸ್ಟಿಯನ್ ಸಮುದ್ರದ ತೀರದಲ್ಲಿರುವ ರಮ್ ಸರ್ ನಲ್ಲಿ ನಡೆದ ಜೌಗು ಪ್ರದೇಶಗಳ ಸಮಾವೇಶದಲ್ಲಿ ಈ ಜೌಗು ಪ್ರದೇಶಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಪ್ರತೀ ವರ್ಷ 2ನೇ ಫೆಬ್ರವರಿ ಯಂದು ವಿಶ್ವ ಜೌಗು ಪ್ರದೇಶದ ದಿನ ಎಂದು ಆಚರಿಸಲು ತೀರ್ಮಾನಿಸಲಾಯಿತು.
ಇದೇ ರೀತಿಯ ಮಾಹಿತಿಗಳನ್ನು ನೀಡಲು ನೀವೂ ಕಾನನಕ್ಕೆ ಬರೆಯಬಹುದು. ಈ ರೀತಿಯ ಪರಿಸರದ ಬಗೆಗಿನ ಮಾಹಿತಿಯನ್ನು ಒದಗಿಸಲು ಇರುವ ಕಾನನ ಇ-ಮಾಸಿಕಕ್ಕೆ ಮುಂದಿನ ತಿಂಗಳ ಸಂಚಿಕೆಗೆ ಲೇಖನಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಪರಿಸರಕ್ಕೆ ಸಂಬಂಧಿಸಿದ ಕಥೆ, ಕವನ, ಛಾಯಾಚಿತ್ರ, ಚಿತ್ರಕಲೆ, ಪ್ರವಾಸ ಕಥನಗಳನ್ನು ಕಾನನ ಮಾಸಿಕದ ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದು.
ಕಾನನ ಪತ್ರಿಕೆಯ ಇ-ಮೇಲ್ ವಿಳಾಸ: [email protected]
ಅಂಚೆ ವಿಳಾಸ:
ಅಡವಿ ಫೀಲ್ಡ್ ಸ್ಟೇಷನ್,
ಒಂಟೆಮಾರನ ದೊಡ್ಡಿ ಗ್ರಾಮ ,
ರಾಗಿಹಳ್ಳಿ ಅಂಚೆ,
ಜಿಗಣಿ ಹೋಬಳಿ,
ಆನೇಕಲ್ ತಾಲ್ಲೂಕು ,
ಬೆಂಗಳೂರು ನಗರ ಜಿಲ್ಲೆ
ಪಿನ್ ಕೋಡ್: 560083. ಗೆ ಕಳಿಸಿಕೊಡಬಹುದು.
ವಿಶೇಷ ಮನವಿ: ಕಾನನ ಪತ್ರಿಕೆಯು ಯುವ ಜನರಲ್ಲಿ, ಮಕ್ಕಳಲ್ಲಿ ಪರಿಸರದ ಪಸರನ್ನು ಹರಡಲು ಮತ್ತು ಪ್ರಕೃತಿ ಬಗ್ಗೆ ಜಾಗೃತಿ ಮೂಡಿಸಲು ಇರುವ ಮುಕ್ತ ವೇದಿಕೆಯಾಗಿದೆ. ಈ ಪತ್ರಿಕೆಯ ವಿನ್ಯಾಸ, ವಿಷಯವನ್ನು ಬದಲಿಸದೆ pdf ಪ್ರತಿಯನ್ನು ಯಥಾಸ್ಥಿತಿಯಲ್ಲಿ ಯಾರು ಬೇಕಾದರೂ ಪ್ರಿಂಟ್ ಮಾಡಿಸಿ ಓದಲು ಬಳಸಬಹುದು ಅಥವಾ ಪರಿಸರದ ಬಗ್ಗೆ ಅರಿವು ಮೂಡಿಸಲು ಶಾಲೆಗಳಿಗೆ ನೀಡಬಹುದು.