ನೀವೂ ಕಾನನಕ್ಕೆ ಬರೆಯಬಹುದು

ನೀವೂ ಕಾನನಕ್ಕೆ ಬರೆಯಬಹುದು

ಶಕ್ತಿಯ ಮೂಲ ಯಾವುದು? ಸ್ಥೂಲವಾಗಿ ಪಂಚಭೂತಗಳು ಶಕ್ತಿಯ ಮೂಲ ಅನ್ನಬಹುದು. ಹಿಂದಿನ ಕಾಲದಲ್ಲಿ ಸೌರಶಕ್ತಿಯನ್ನು ಮಾತ್ರ ಹೆಚ್ಚಾಗಿ ಬಳಸಲು ಅರಿತ್ತಿದ್ದೆವು. ಈಗಿನ ಜೀವನ ಶೈಲಿಯಲ್ಲಿ ವಿದ್ಯುಚ್ಛಕ್ತಿಯ ಬಳಕೆ ಅತಿ ಮುಖ್ಯ. ಭೂಮಿಯಲ್ಲಿ ನೈಸರ್ಗಿಕವಾಗಿ ದೊರೆಯುವ ಇಂಧನಗಳು, ಕಲ್ಲಿದ್ದಲು ಇತ್ಯಾದಿ ವಿದ್ಯುತ್ತನ್ನು ಉತ್ಪಾದಿಸುವ ಮೂಲವಸ್ತುಗಳಾಗಿವೆ. ಇತ್ತೀಚೆಗೆ ಉಷ್ಣ ಶಕ್ತಿ ಹಾಗೂ ಅಣುಶಕ್ತಿ ಕೂಡ ಬಳಸಲಾಗುತ್ತಿದೆ. ಉರಿಯುವ ಇಂಧನಗಳಿಂದ ವಿದ್ಯುಚ್ಛಕ್ತಿಯನ್ನು ಉತ್ಪಾದಿಸಬಹುದಾದರೂ, ಭೂಮಿಯಲ್ಲಿ ಅವುಗಳ ಲಭ್ಯತೆ ಸೀಮಿತ. ಬಳಕೆ ಹೆಚ್ಚಾಗುತ್ತಾ ಹೋದಂತೆ ನೈಸರ್ಗಿಕ ಸಂಪನ್ಮೂಲಗಳ ಕೊರತೆ ಎದುರಾಗುವುದು ಅನಿವಾರ್ಯ. ಪ್ರಕೃತಿ ನಮ್ಮ ಆಸೆಗಳನ್ನು ಪೂರೈಸುತ್ತದೆಯೇ ಹೊರತು, ದುರಾಸೆಗಳನ್ನಲ್ಲ ಎಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹೇಳಿದ್ದಾರೆ. ಇರುವ ನೈಸರ್ಗಿಕ ಸಂಪನ್ಮೂಲಗಳನ್ನು ಮಿತವಾಗಿ ಬಳಸಬೇಕು. ಮುಂದಿನ ಪೀಳಿಗೆಗೂ ಕಾಯ್ದಿರಿಸಬೇಕು. ಪ್ರಕೃತಿ ಕೊಟ್ಟಿರುವ ಸಂಪನ್ಮೂಲಗಳನ್ನು ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಜಾಗೃತಿಯನ್ನು ಮೂಡಿಸಲು ಡಿಸೆಂಬರ್ 14ನ್ನು “ರಾಷ್ಟ್ರೀಯ ಶಕ್ತಿ ಸಂರಕ್ಷಣಾ ದಿನ” ಎಂದು ಘೋಷಿಸಿದೆ. ಶಕ್ತಿ ಮೂಲಗಳ ಅಳಿಯುವಿಕೆಯು ನಮ್ಮ ಪರಿಸರದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಶಕ್ತಿ ಮೂಲಗಳ ಬಗ್ಗೆ ಹಾಗೂ ಇತರ ಆಸಕ್ತಿಯುತ ವಿಚಾರಗಳನ್ನು ಹಂಚಿಕೊಳ್ಳಲು ನೀವೂ ಕಾನನಕ್ಕೆ ಬರೆಯಬಹುದು.

ಈ ರೀತಿಯ ಪರಿಸರದ ಬಗೆಗಿನ ಮಾಹಿತಿಯನ್ನು ಒದಗಿಸಲು ಇರುವ ಕಾನನ ಇ-ಮಾಸಿಕಕ್ಕೆ ಮುಂದಿನ ತಿಂಗಳ ಸಂಚಿಕೆಗೆ ಲೇಖನಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಪರಿಸರಕ್ಕೆ ಸಂಬಂಧಿಸಿದ ಕಥೆ, ಕವನ, ಛಾಯಾಚಿತ್ರ, ಚಿತ್ರಕಲೆ, ಪ್ರವಾಸ ಕಥನಗಳನ್ನು ಕಾನನ ಮಾಸಿಕದ ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದು.

ಕಾನನ ಪತ್ರಿಕೆಯ ಇ-ಮೇಲ್ ವಿಳಾಸ: kaanana.mag@gmail.com
ಅಂಚೆ ವಿಳಾಸ:

ಅಡವಿ ಫೀಲ್ಡ್ ಸ್ಟೇಷನ್,
ಒಂಟೆಮಾರನ ದೊಡ್ಡಿ ಗ್ರಾಮ ,
ರಾಗಿಹಳ್ಳಿ ಅಂಚೆ,
ಜಿಗಣಿ ಹೋಬಳಿ,
ಆನೇಕಲ್ ತಾಲ್ಲೂಕು ,
ಬೆಂಗಳೂರು ನಗರ ಜಿಲ್ಲೆ
ಪಿನ್ ಕೋಡ್: 560083. ಗೆ ಕಳಿಸಿಕೊಡಬಹುದು.

Spread the love

Leave a Reply

Your email address will not be published. Required fields are marked *

error: Content is protected.