ಕಾನನ

ನಿಸರ್ಗದೆಡೆಗೆ ಪಯಣ — 2011ರಿಂದ ಕನ್ನಡದಲ್ಲಿ ವನ್ಯವಿಜ್ಞಾನ, ಉಚಿತವಾಗಿ

ನೀವೂ ಕಾನನಕ್ಕೆ ಬರೆಯಬಹುದು

ಶಕ್ತಿ ನಮ್ಮ ದೈನಂದಿನ ಬದುಕಿನ ಅವಿಭಾಜ್ಯ ಅಂಗ. ಅದರ ಮಿತ ಬಳಕೆ ಮತ್ತು ನವೀಕರಿಸಬಹುದಾದ ಮೂಲಗಳ ಬಳಕೆಯ ಅರಿವು ಮೂಡಿಸಲು ಡಿಸೆಂಬರ್ 14ರಂದು ರಾಷ್ಟ್ರೀಯ ಶಕ್ತಿ ಸಂರಕ್ಷಣಾ ದಿನ ಆಚರಿಸಲಾಗುತ್ತದೆ. ಪರಿಸರಕ್ಕೆ ಸಂಬಂಧಿಸಿದ ಕಥೆ, ಕವನ, ಛಾಯಾಚಿತ್ರ, ಚಿತ್ರಕಲೆ ಮತ್ತು ಪ್ರವಾಸ ಕಥನಗಳನ್ನು ಕಾನನ ಮಾಸಿಕದ ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದು.

  

    © ಧನರಾಜ್ ಎಂ.

 ಶಕ್ತಿ ನಮ್ಮ ದೈನಂದಿನ ಬದುಕಿನ ಅವಿಭಾಜ್ಯ ಅಂಗ. ಕಲ್ಲಿದ್ದಲು, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲದಂತಹ ಇಂಧನಗಳು ವಿದ್ಯುತ್ ಉತ್ಪಾದನೆಯ ಪ್ರಮುಖ ಮೂಲಗಳಾಗಿವೆ. ಇವುಗಳ ಲಭ್ಯತೆ ಸೀಮಿತವಾಗಿದ್ದು, ಅತಿಯಾದ ಬಳಕೆಯಿಂದ ಪರಿಸರ ಮಾಲಿನ್ಯ ಮತ್ತು ಹವಾಮಾನ ಬದಲಾವಣೆಯಂತಹ ಸಮಸ್ಯೆಗಳು ಉಂಟಾಗುತ್ತವೆ. ಆದ್ದರಿಂದ ಶಕ್ತಿಯನ್ನು ಮಿತವಾಗಿ ಬಳಸುವುದು ಮತ್ತು ನೈಸರ್ಗಿಕ ಸಂಪನ್ಮೂಲಗಳನ್ನು ಮುಂದಿನ ಪೀಳಿಗೆಗಾಗಿ ಸಂರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ.

ಶಕ್ತಿಯ ಮಹತ್ವ ಮತ್ತು ಅದರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲು ಪ್ರತಿ ವರ್ಷ ಡಿಸೆಂಬರ್ 14ರಂದು ಭಾರತದಲ್ಲಿ ರಾಷ್ಟ್ರೀಯ ಶಕ್ತಿ ಸಂರಕ್ಷಣಾ ದಿನವನ್ನು ಆಚರಿಸಲಾಗುತ್ತದೆ. ವಿದ್ಯುತ್ ಬಳಕೆಯನ್ನು ಕಡಿಮೆ ಮಾಡುವುದು, ಸಮರ್ಥ ಸಾಧನಗಳನ್ನು ಬಳಸುವುದು ಮತ್ತು ನವೀಕರಿಸಬಹುದಾದ ಶಕ್ತಿಯ ಮೂಲಗಳಿಗೆ ಆದ್ಯತೆ ನೀಡುವುದು ನಮ್ಮಿಂದ ಸಾಧ್ಯವಾಗುವ ಸಣ್ಣ ಪ್ರಯತ್ನಗಳು.

ಈ ರೀತಿಯ ಪರಿಸರದ ಬಗೆಗಿನ ಮಾಹಿತಿಯನ್ನು ಒದಗಿಸಲು ಇರುವ ಕಾನನ ಇ-ಮಾಸಿಕಕ್ಕೆ ಮುಂದಿನ ತಿಂಗಳ ಸಂಚಿಕೆಗೆ ಲೇಖನಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಪರಿಸರಕ್ಕೆ ಸಂಬಂಧಿಸಿದ ಕಥೆ, ಕವನ, ಛಾಯಾಚಿತ್ರ, ಚಿತ್ರಕಲೆ, ಪ್ರವಾಸ ಕಥನಗಳನ್ನು ಕಾನನ ಮಾಸಿಕದ ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದು. 


ಕಾನನ ಪತ್ರಿಕೆಯ ಇ-ಮೇಲ್ ವಿಳಾಸ: kaanana.mag@gmail.com 

ಅಂಚೆ ವಿಳಾಸ:

ಅಡವಿ ಫೀಲ್ಡ್ ಸ್ಟೇಷನ್,
ಒಂಟೆಮಾರನ ದೊಡ್ಡಿ ಗ್ರಾಮ ,
ರಾಗಿಹಳ್ಳಿ ಅಂಚೆ,
ಜಿಗಣಿ ಹೋಬಳಿ,
ಆನೇಕಲ್ ತಾಲ್ಲೂಕು ,
ಬೆಂಗಳೂರು ನಗರ ಜಿಲ್ಲೆ
ಪಿನ್ ಕೋಡ್: 560083. ಗೆ ಕಳಿಸಿಕೊಡಬಹುದು.

ಕಾನನದ ದನಿ ಹರಡಿ

ಅಭಿಪ್ರಾಯ ತಿಳಿಸಿ

Your email address will not be published. Required fields are marked *