ವೃತ್ತಿಯಲ್ಲಿ ಗಣಿತ ಶಿಕ್ಷಕ ನಾನು ಹುಟ್ಟಿ ಬೆಳೆದದ್ದು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಮಧ್ಯ ಇರುವ ಒಂದು ಸಣ್ಣ ಹಳ್ಳಿಯಲ್ಲಿ. ನಮ್ಮ ಊರಿನ ಸುತ್ತ ಕಾಡಿರುವ ಕಾರಣವೋ ಏನೋ ಚಿಕ್ಕಂದಿನಿಂದಲೂ ಕಾಡು, ವನ್ಯಜೀವಿಗಳ ಬಗ್ಗೆ ವಿಶೇಷ ಆಸಕ್ತಿ . ನನ್ನೀ ಆಸಕ್ತಿಗೆ ಪುಷ್ಠಿ ನೀಡಿದ್ದು ಹಾಗೂ ಪರಿಸರದ ಬಗ್ಗೆ ನನಗೆ ತಿಳಿದದ್ದನ್ನು ಸುತ್ತಲಿನ ಹಳ್ಳಿ ಮಕ್ಕಳಿಗೆ ತಿಳಿಸಿಕೊಡಲು ಅವಕಾಶ ಕಲ್ಪಿಸಿಕೊಟ್ಟಿದ್ದು WCG. ಕನ್ನಡ ಸಾಹಿತ್ಯಕ್ಕೆ ನನ್ನನ್ನು ಎಳೆತಂದದ್ದು ಕೆ ಪಿ ಪೂರ್ಣಚಂದ್ರ ತೇಜಸ್ವಿ ರವರ ಪುಸ್ತಕಗಳು. ಇವರ ಪುಸ್ತಕಗಳಿಂದ ಪ್ರಭಾವಿತನಾಗಿ ಕನ್ನಡ ಸಾಹಿತ್ಯದ ಕೆಲವು ಶ್ರೇಷ್ಠ ಸಾಹಿತಿಗಳ ಕೃತಿಗಳನ್ನು ಓದಿದ ಮೇಲೆ ಕನ್ನಡ ಭಾಷೆಗೆ ಕನ್ನಡ ನಾಡಿಗೆ ನನ್ನ ಕೈಲಾದಷ್ಟು ಸೇವೆ ಮಾಡಬೇಕೆಂಬುದು ಮನಸ್ಸಿನಲ್ಲಿ ನೆಲೆಯೂರಿತು. ಈ ಕನಸು ನನಸಾಗಲು ಅವಕಾಶ ಕಲ್ಪಿಸಿಕೊಟ್ಟಿದ್ದು ಕಾನನ ಇ-ಮಾಸ ಪತ್ರಿಕೆ. ಛಾಯಾಗ್ರಹಣ, ಪಕ್ಷಿ ವೀಕ್ಷಣೆ, ಚಾರಣ , ಪುಸ್ತಕ ಓದುವುದು ನನ್ನ ಕೆಲವು ಹವ್ಯಾಸಗಳು.