ನೀವೂ ಕಾನನಕ್ಕೆ ಬರೆಯಬಹುದು
© ಧನರಾಜ್ ಎಂ.
ಹವಾಮಾನ ಬದಲಾವಣೆ ಇಂದು ಜಗತ್ತಿನ ದೊಡ್ಡ ಸವಾಲುಗಳಲ್ಲಿ ಒಂದಾಗಿದೆ. ಮಳೆಯ ಏರುಪೇರು, ಅತಿಯಾದ ಬಿಸಿಲು, ಪ್ರವಾಹ, ಬರ ಹಾಗೂ ಕಾಡ್ಗಿಚ್ಚುಗಳು ಇದರ ಪರಿಣಾಮಗಳಾಗಿವೆ. ಆದರೆ ಈ ಸಮಸ್ಯೆಗೆ ಪರಿಹಾರ ಹುಡುಕುವುದು ಸರ್ಕಾರಗಳ ಜವಾಬ್ದಾರಿ ಮಾತ್ರವಲ್ಲ, ಪ್ರತಿಯೊಬ್ಬ ನಾಗರೀಕನ ಜವಾಬ್ದಾರಿಯಾಗಿದೆ. ಮನೆಯಿಂದ ಹೊರಡುವಾಗ ಅನಗತ್ಯ ವಿದ್ಯುತ್ ದೀಪಗಳನ್ನು ಆರಿಸುವುದು, ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದು, ಮರಗಳನ್ನು ನೆಟ್ಟು ಪೋಷಿಸುವುದು, ಸಾಧ್ಯವಾದರೆ ನಡೆದು ಅಥವಾ ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವುದು ಇಂತಹ ಸಣ್ಣ ಅಭ್ಯಾಸಗಳೂ ಸಹ ಪರಿಸರದ ಮೇಲೆ ಒಳ್ಳೆಯ ಪರಿಣಾಮ ಬೀರುತ್ತವೆ.
ಒಬ್ಬ ವ್ಯಕ್ತಿಯ ಸಣ್ಣ ಪ್ರಯತ್ನ ಅಲ್ಪವೆನಿಸಬಹುದು. ಆದರೆ ಲಕ್ಷಾಂತರ ಜನರು ಇಂತಹ ಪರಿಸರ ಸ್ನೇಹಿ ಅಭ್ಯಾಸಗಳನ್ನು ಅಳವಡಿಸಿಕೊಂಡರೆ ಅದು ದೊಡ್ಡ ಬದಲಾವಣೆಗೆ ಕಾರಣವಾಗುತ್ತದೆ. ಅಕ್ಟೋಬರ್ 24 ಅನ್ನು ಅಂತರರಾಷ್ಟ್ರೀಯ ಹವಾಮಾನ ಕ್ರಿಯಾ ದಿನ (International Day of Climate Action) ಎಂದು ಆಚರಿಸಲಾಗುತ್ತದೆ. ಹವಾಮಾನ ಬದಲಾವಣೆಯನ್ನು ತಡೆಯಲು ಪ್ರತಿಯೊಬ್ಬರೂ ತಮ್ಮಿಂದ ಸಾಧ್ಯವಾದ ಒಂದು ಸಣ್ಣ ಹೆಜ್ಜೆಯನ್ನಾದರೂ ಇಡಬೇಕು ಎಂಬ ಸಂದೇಶವನ್ನು ಈ ದಿನ ಸಾರುತ್ತದೆ.
ಈ ರೀತಿಯ ಪರಿಸರದ ಬಗೆಗಿನ ಮಾಹಿತಿಯನ್ನು ಒದಗಿಸಲು ಇರುವ ಕಾನನ ಇ-ಮಾಸಿಕಕ್ಕೆ ಮುಂದಿನ ತಿಂಗಳ ಸಂಚಿಕೆಗೆ ಲೇಖನಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಪರಿಸರಕ್ಕೆ ಸಂಬಂಧಿಸಿದ ಕಥೆ, ಕವನ, ಛಾಯಾಚಿತ್ರ, ಚಿತ್ರಕಲೆ, ಪ್ರವಾಸ ಕಥನಗಳನ್ನು ಕಾನನ ಮಾಸಿಕದ ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದು.
ಕಾನನ ಪತ್ರಿಕೆಯ ಇ-ಮೇಲ್ ವಿಳಾಸ: kaanana.mag@gmail.com
ಅಂಚೆ ವಿಳಾಸ:
ಅಡವಿ ಫೀಲ್ಡ್ ಸ್ಟೇಷನ್,
ಒಂಟೆಮಾರನ ದೊಡ್ಡಿ ಗ್ರಾಮ ,
ರಾಗಿಹಳ್ಳಿ ಅಂಚೆ,
ಜಿಗಣಿ ಹೋಬಳಿ,
ಆನೇಕಲ್ ತಾಲ್ಲೂಕು ,
ಬೆಂಗಳೂರು ನಗರ ಜಿಲ್ಲೆ
ಪಿನ್ ಕೋಡ್: 560083. ಗೆ ಕಳಿಸಿಕೊಡಬಹುದು.

ವೈಲ್ಡ್ಲೈಫ್ ಕನ್ಸರ್ವೇಶನ್ ಗ್ರೂಪ್ (WCG) — ಕಾನನ ಪತ್ರಿಕೆಯ ಪ್ರಕಾಶಕರು. ಬೆಂಗಳೂರು ಮೂಲದ ಪ್ರಕೃತಿ ಸಂರಕ್ಷಣಾ ಸಂಸ್ಥೆ.



